Sunday, July 3, 2022

ನಟ ಸುಶಾಂತ್ ಸಿಂಗ್ ಸ್ನೇಹಿತೆ ರಿಯಾ ಚಕ್ರವರ್ತಿಗೆ ಇಡಿ ನೋಟಿಸ್, ಆ.8ರಂದು ಹಾಜರಿಗೆ ಸೂಚನೆ

Follow Us

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸ್ನೇಹಿತೆ ರಿಯಾ ಚಕ್ರವರ್ತಿಗೆ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್‌ ನೀಡಿದೆ.
ಸುಶಾಂತ್ ಬ್ಯಾಂಕ್ ಖಾತೆಯಿಂದ ಕೋಟ್ಯಂತರ ರೂ. ನಾಪತ್ತೆ ಹಿನ್ನೆಲೆಯಲ್ಲಿ ಸುಶಾಂತ್ ಸಾವಿನ ಪ್ರಕರಣದಲ್ಲಿ ಇಡಿ ಕೂಡ ಪ್ರವೇಶ ಎಂಟ್ರಿ ಆಗಿದೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ರಿಯಾ ಚಕ್ರವರ್ತಿಗೆ ನೋಟಿಸ್‌ ನೀಡಿದ್ದು, ಇದೇ ವೇಳೆ ಶುಕ್ರವಾರ (ಆ.8) ಹಾಜರಾಗುವಂತೆ ಸೂಚಿಸಲಾಗಿದೆ. ಈ ಹಿಂದೆ ಇಡಿ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದ್ದರು. ಹೀಗಾಗಿ ಪ್ರಕರಣ ದಾಖಲಿಸಿಕೊಂಡಿರುವ ಇಡಿ ವಿಚಾರಣೆಗೆ ಬರುವಂತೆ ಸೂಚನೆ ನೀಡಿದೆ.
ಸುಶಾಂತ್ ಸಾವಿನ ಕೇಸ್ ಸಿಬಿಐಗೆ
ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಕೇಂದ್ರವು ಅಧಿಸೂಚನೆ ಹೊರಡಿಸಿದ್ದು, ಪ್ರಕರಣದ ತನಿಖೆ ನಡೆಸುವಂತೆ ಕೋರಿ ಅಧಿಸೂಚನೆಯ ಪ್ರತಿಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಕಳುಹಿಸಲಾಗಿದೆ. ರಜಪೂತ್ ಅವರ ತಂದೆಯ ಕೋರಿಕೆಯ ಮೇರೆಗೆ ಬಿಹಾರ ಸರ್ಕಾರ ಮಂಗಳವಾರ ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. 34 ವರ್ಷದ ರಜಪೂತ್ ಜೂನ್ 14 ರಂದು ಮುಂಬೈನ ಉಪನಗರ ಬಾಂದ್ರಾದಲ್ಲಿರುವ ತನ್ನ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಂದಿನಿಂದ ಮುಂಬೈ ಪೊಲೀಸರು ವಿವಿಧ ಕೋನಗಳನ್ನು ಗಮನದಲ್ಲಿಟ್ಟುಕೊಂಡು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ವಿವರ ನೀಡುವಂತೆ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಪೊಲೀಸರಿಗೆ ಸೂಚಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!