Thursday, August 18, 2022

ರಾಜಕೀಯ ಗುರುವಿನ ಮಗನಿಗೇ ತಿರುಮಂತ್ರ: ಇದು ಏಕನಾಥ ಶಿಂಧೆ ತಂತ್ರ

Follow Us

newsics.com

ಮುಂಬೈ: ರಾಜಕೀಯ ಗುರುವಿನ ಮಗನಿಗೆ ತಿರುಮಂತ್ರ ಹಾಕಿ ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಈಗ ಮುಖ್ಯಮಂತ್ರಿ ಕುರ್ಚಿಯನ್ನೇರಿದ ಏಕನಾಥ್ ಶಿಂಧೆ ಅವರದು ಶ್ರಮದ ಜೀವನ.

ಏಕನಾಥ್​ ಶಿಂಧೆ ಅವರಿಗೆ 56 ವರ್ಷ ವಯಸ್ಸು. ಆರಂಭದಲ್ಲಿ ಆಟೋ ಚಾಲಕ. ಕುತೂಹಲದ ಸಂಗತಿ ಎಂದರೆ, ಉದ್ಧವ್ ಠಾಕ್ರೆ ಅವರ ತಂದೆ ಬಾಳಾಸಾಹೇಬ್ ಠಾಕ್ರೆ ಏಕನಾಥ್ ಶಿಂಧೆ ಅವರ ರಾಜಕೀಯ ಗುರು. ಇದೀಗ ಅವರೇ ಉದ್ಧವ್​ ಠಾಕ್ರೆಯ ಕುರ್ಚಿಯನ್ನು ಏರಿದ್ದಾರೆ.
ಏಕನಾಥ್ ಶಿಂಧೆ ಮಹಾರಾಷ್ಟ್ರದ ಸತಾರಾ ನಿವಾಸಿ. ರಾಜಕೀಯ ವಿದ್ಯಾರ್ಥಿಯಾಗಿರುವ ಇವರು, ಬಾಳಾಸಾಹೇಬ್​ ಠಾಕ್ರೆ ಅವರನ್ನು ಗುರುವಾಗಿ ಸ್ವೀಕರಿಸಿದ್ದರು. ರಾಜಕೀಯದಲ್ಲಿಯೇ ಮುಂದುವರೆಯಬೇಕು ಎನ್ನುವ ಕಾರಣಕ್ಕೆ ಸತಾರಾವನ್ನು ತೊರೆದು ಶಿವಸೇನೆಯ ಪ್ರಮುಖ ನೆಲೆಯಾದ ಥಾಣೆಗೆ ತೆರಳಿದರು.
ಶಿವಸೇನೆ ಸೇರುವ ಮುನ್ನ ಶಿಂಧೆ ಬಹಳ ಕಾಲ ಕಾರು ಓಡಿಸುತ್ತಿದ್ದರು. 1980 ರ ದಶಕದಲ್ಲಿ ಥಾಣೆಯಲ್ಲಿ ಶಾಖಾ ಮುಖ್ಯಸ್ಥರಾಗಿದ್ದ ಶಿಂಧೆ 2004 ರಲ್ಲಿ ಶಾಸಕರಾಗುವ ಮೊದಲು ಥಾಣೆ ಮುನ್ಸಿಪಲ್ ಕಾರ್ಪೊರೇಟರ್ ಆಗಿದ್ದರು. ಶಿಂಧೆ ಅವರು ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ ಮತ್ತು ಮೂರು ವರ್ಷಗಳಿಂದ ನಾಗರಿಕ ಸಂಸ್ಥೆ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದಾರೆ. ಅವರು ನಾಲ್ಕು ವರ್ಷಗಳ ಕಾಲ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸದನದ ನಾಯಕರಾಗಿ ಸೇವೆ ಸಲ್ಲಿಸಿದ್ದರು.
2004 ರಿಂದ, ಅವರು ಸತತ ನಾಲ್ಕು ಚುನಾವಣೆಗಳನ್ನು ಗೆದ್ದಿದ್ದಾರೆ, ಅವರ ಮಗ ಶ್ರೀಕಾಂತ್ ಶಿಂಧೆ ಕಲ್ಯಾಣ್‌ನಿಂದ ಸೇನಾ ಸಂಸದರಾಗಿದ್ದಾರೆ.

ಶಿವ ಸೈನಿಕನನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ: ಕಳಂಕ ತಪ್ಪಿಸಲು ಪದತ್ಯಾಗ ಮಾಡಿದ ಬಿಜೆಪಿ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!