newsics.com
ನವದೆಹಲಿ: ಗುಜರಾತ್ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯೆ ತೀವ್ರ ವಾಗ್ದಾಳಿ ನಡೆದಿತ್ತು. ಖರ್ಗೆ , ಪ್ರಧಾನಿ ನರೇಂದ್ರ ಮೋದಿ ಅವರನ್ನು 10 ತಲೆಯ ರಾವಣ ಎಂದು ಹೇಳಿ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಬಿಜೆಪಿ ಕೂಡ ತೀಕ್ಷ್ಣ ಪ್ರತಿಕ್ರಿಯೆ ನೀಡಿತ್ತು. ಇದೀಗ ಗುಜರಾತ್ ನಲ್ಲಿ ಮತದಾನ ಮುಕ್ತಾಯವಾಗಿದೆ. ಮತ ಎಣಿಕೆ ಮಾತ್ರ ಬಾಕಿ ಇದೆ.
ಎಲ್ಲ ರಾಜಕೀಯ ನಾಯಕರು ಗುಜರಾತ್ ನಿಂದ ದೆಹಲಿ ತಲುಪಿದ್ದಾರೆ. ಜಿ-20 ರಾಷ್ಟ್ರಗಳ ಸಂಘಟನೆಯ ಅಧ್ಯಕ್ಷ ಸ್ಥಾನ ಭಾರತಕ್ಕೆ ಲಭಿಸಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಎಲ್ಲ ರಾಜಕೀಯ ಮುಖಂಡರ ಜತೆ ಮಾತುಕತೆ ನಡೆಸಿದರು. ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಮೋದಿ ಆತ್ಮೀಯವಾಗಿ ಮಾತುಕತೆ ನಡೆಸಿದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಸಭೆಯಲ್ಲಿ ಮೋದಿ ಜತೆ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು.
ಜಿ- 20 ರಾಷ್ಟ್ರಗಳ ಅಧ್ಯಕ್ಷ ಸ್ಥಾನ ಭಾರತಕ್ಕೆ ಲಭಿಸಿರುವುದನ್ನು ಅಂತಾರಾಷ್ಟ್ರೀಯ ಸಮುದಾಯ ಸ್ವಾಗತಿಸಿದೆ