Monday, October 3, 2022

ಬಿಹಾರ ಚುನಾವಣೆ; 1,157 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ

Follow Us

newsics.com
ನವದೆಹಲಿ: ಸುಪ್ರೀಂ ಕೋರ್ಟ್’ನ ಅಭಿಪ್ರಾಯವನ್ನೂ ಲೆಕ್ಕಿಸದೆ ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 1,157 ಅಭ್ಯರ್ಥಿಗಳು ಅಪರಾಧದ ಹಿನ್ನೆಲೆಯುಳ್ಳವರು ಸ್ಪರ್ಧಿಸಿದ್ದರು.
ಚುನಾವಣಾ ಆಯೋಗದ ಅಂಕಿ ಅಂಶಗಳಿಂದ ಈ ಮಾಹಿತಿ ಬೆಳಕಿಗೆ ಬಂದಿದೆ. ಮೂರು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 3,733 ಮಂದಿ ಕಣಕ್ಕಿಳಿದಿದ್ದು, ಈ ಪೈಕಿ 371 ಮಹಿಳಾ ಅಭ್ಯರ್ಥಿಗಳೂ ಇದ್ದಾರೆ ಎಂದು ಆಯೋಗ ಹೇಳಿದೆ.
ಕಳೆದ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ನಿರ್ದೇಶನದ ಅನ್ವಯ ಮಾರ್ಚ್‌ನಲ್ಲಿ ಆಯೋಗವು ಪ್ರಕಟಣೆಯೊಂದನ್ನು ಹೊರಡಿಸಿತ್ತು. ಅಪರಾಧ ಹಿನ್ನೆಲೆ ಇರುವವರನ್ನು ಏತಕ್ಕಾಗಿ ಕಣಕ್ಕಿಳಿಸುತ್ತಿದ್ದೀರಿ ಎಂಬುದಕ್ಕೆ ಸಮರ್ಥನೆ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸಿತ್ತು. ಇದೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಅಪರಾಧದ ಹಿನ್ನೆಲೆಯ ಮಾಹಿತಿಯನ್ನು ಬಹಿರಂಗಪಡಿಸಿದ್ದವು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಕುರಿತು ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಮೂರು ಹಂತಗಳಲ್ಲಿ ಜಾಹೀರಾತು ನೀಡಬೇಕೆಂದೂ ಆಯೋಗವು ಸೆಪ್ಟೆಂಬರ್‌ನಲ್ಲಿ ಸೂಚಿಸಿತ್ತು. ಚುನಾವಣಾ ಅವಧಿಯಲ್ಲಿ ಈ ಜಾಹೀರಾತುಗಳು ಪ್ರಕಟವಾಗಬೇಕೆಂದೂ ಹೇಳಿತ್ತು.

ರಿಯಾದ್-ಬೆಂಗಳೂರು ವಿಮಾನದಲ್ಲಿ ಹೈಡ್ರಾಲಿಕ್ ಸೋರಿಕೆ

ಸಾವೆಂದರೆ…

ಟ್ರಂಪ್ ಸಂಸಾರದಲ್ಲಿ ಬಿರುಕು; ಮೆಲೆನಿಯಾ ಡಿವೋರ್ಸ್ ಸಾಧ್ಯತೆ

94 ಲಕ್ಷ ರೂ. ಮೌಲ್ಯದ 1.836 ಕೆಜಿ ಚಿನ್ನ ವಶ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!