Monday, April 12, 2021

18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ

ನವದೆಹಲಿ: ಕೊರೋನಾ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ರಾಜ್ಯಸಭಾ ಚುನಾವಣೆಯನ್ನು ನಡೆಸಲು ಆಯೋಗ ಮುಂದಾಗಿದ್ದು, ರಾಜ್ಯಸಭೆಯ 18 ಸ್ಥಾನಗಳಿಗೆ ಜೂನ್ ನಲ್ಲಿ ಚುನಾವಣೆ ದಿನಾಂಕ ನಿಗದಿಪಡಿಸಿ ಆಯೋಗ ಆದೇಶ ಹೊರಡಿಸಿದೆ.
ಜೂನ್ 19 ರಂದು ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆ ನಡೆಯಲಿದ್ದು, ಜೂನ್ 22 ರ ಒಳಗೆ ಎಲ್ಲಾ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳಿಸಲು ಆಯೋಗ ಆದೇಶಿಸಿದೆ.
ಮಾರ್ಚ್ 26 ರಂದು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಆದರೇ ಕರೋನಾ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿತ್ತು. ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಜೂನ್ 25ಕ್ಕೆ ಕರ್ನಾಟಕದ ಬಿಕೆ ಹರಿಪ್ರಸಾದ್, ಪ್ರಭಾಕರ್ ಕೋರೆ, ರಾಜೀವ್ ಗೌಡ ಮತ್ತು ಕುಪೇಂದ್ರ ರೆಡ್ಡಿ ಅವರ ರಾಜ್ಯಸಭೆ ಅವಧಿ ಅಂತ್ಯವಾಗಲಿದೆ. ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಘೋಷಿಸಿದೆ. ಜೂನ್ 9ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 10ರಂದು ನಾಮಪತ್ರ ಪರಿಶೀಲನೆ
ಆಂಧ್ರಪ್ರದೇಶದ 4 ಸ್ಥಾನ, ಗುಜರಾತ್ 4, ಜಾರ್ಖಂಡ 2, ಮಧ್ಯಪ್ರದೇಶ 3, ಮಣಿಪುರ 1, ಮೇಘಾಲಯ 1 ಹಾಗೂ ರಾಜಸ್ಥಾನದ 3 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ.
55 ರಾಜ್ಯಸಭಾ ಸೀಟುಗಳ ಪೈಕಿ 37 ಸೀಟುಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದ 18 ಸೀಟುಗಳಿಗಾಗಿ ಚುನಾವಣೆ ನಡೆಯಲಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!