Monday, April 12, 2021

ಕೇರಳದ ಮಾನ ಹರಾಜು ಹಾಕಿದ ಗರ್ಭಿಣಿ ಆನೆಯ ಬರ್ಬರ ಹತ್ಯೆ

ನವದೆಹಲಿ:ಕೇರಳದಲ್ಲಿ ಗರ್ಭಿಣಿ ಆನೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೇರಳದ ಮಾನ ಹರಾಜಾಗಿದೆ. ಸಾಕ್ಷರತೆ ಮಟ್ಟದಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿರುವ ಕೇರಳದ ಜನರು ಇಂತಹ ಕ್ರೂರ ಕೃತ್ಯ ನಡೆಸಿರುವುದು ಸಾಮಾಜಿಕ ಜಾಲ ತಾಣದಲ್ಲಿ ಕಿಡಿ ಹೊತ್ತಿಸಿದೆ. ಈ ಕುರಿತಂತೆ ಸಮಗ್ರ ವರದಿ  ಸಲ್ಲಿಸುವಂತೆ ಕೇರಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕ್ರಿಕೆಟ್ ತಾರೆಗಳಾದ ವಿರಾಟ್ ಕೊಹ್ಲಿ, ಕೆ . ಎಲ್ . ರಾಹುಲ್ ಕೂಡ  ಟ್ವಿಟರ್ ನಲ್ಲಿ ಆನೆಯ ದಾರುಣ ಸಾವಿಗೆ ಕಂಬನಿ ಮಿಡಿದಿದ್ದಾರೆ. ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಮರಳಿನಲ್ಲಿ ಆನೆಯ ಚಿತ್ರ ಬಿಡಿಸುವುದರ ಮೂಲಕ  ನಮನ ಸಲ್ಲಿಸಿದ್ದಾರೆ. ಇದೇ ವೇಳೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್  ಹೇಳಿದ್ದಾರೆ. ಆಹಾರ  ಹುಡುಕಿಕೊಂಡು ಊರಿಗೆ ಬಂದ ಆನೆಗೆ ಅನನಾಸು ಹಣ್ಣಿನ ಜತೆ ಸ್ಫೋಟಕ ಇರಿಸಿ ತಿನ್ನಲು  ನೀಡಲಾಗಿತ್ತು. ಇದು ಬಾಯಿಯಲ್ಲಿ  ಸ್ಫೋಟಗೊಂಡ ಪರಿಣಾಮ ಆನೆ ನೀರಿನಲ್ಲಿ ನಿಂತ ಸ್ಥಿತಿಯಲ್ಲಿ ಸಾವನ್ನಪ್ಪಿತ್ತು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!