newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಮುಂಜಾನೆ ಪೊಲೀಸರು ಮತ್ತು ಕ್ರಿಮಿನಲ್ ಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು ನ಼ಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಕ್ರಿಮಿನಲ್ ಗಳು ಹತರಾಗಿದ್ದಾರೆ.
ದೆಹಲಿಯಲಿ ಕಜೂರಿ ಖಾಸ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ.
ದುಷ್ಕರ್ಮಿಗಳು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.