Monday, April 12, 2021

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ದ ಕಾರ್ಯಾಚರಣೆ ಆರಂಭ

ಶ್ರೀನಗರ:  ಜಮ್ಮು ಕಾಶ್ಮೀರದ  ಕುಲ್ಗಾಂ ಜಿಲ್ಲೆಯ ವಾನ್ ಪೋರಾ ಎಂಬಲ್ಲಿ ಭದ್ರತಾಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ. ಯೋಧರು, ಸಿ ಆರ್ ಪಿ ಎಫ್  ಮತ್ತು ಜಮ್ಮು ಕಾಶ್ಮೀರ ಪೊಲೀಸ್ ಸಿಬ್ಬಂದಿ ಒಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ನಿರತವಾಗಿದೆ. ಎಷ್ಟು ಮಂದಿ ಭಯೋತ್ಪಾದಕರಿದ್ದಾರೆ ಎಂಬುದು ಇದುವರೆಗೆ ತಿಳಿದು ಬಂದಿಲ್ಲ. ಇಡೀ ಪ್ರದೇಶವನ್ನು ಭದ್ರತಾಪಡೆಗಳು ಸುತ್ತುವರಿದಿವೆ. ಭಯೋತ್ಪಾದಕರು ತಪ್ಪಿಸಿ ಹೋಗದಂತೆ ಎಚ್ಚರಿಕೆ ವಹಿಸಲಾಗಿದ್ದು, ಎಲ್ಲ ನಿರ್ಗಮನ ದ್ವಾರಗಳಲ್ಲಿ ಯೋಧರು ಕಾವಲು ಕಾಯುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕರ ವಿರುದ್ದದ ಕಾರ್ಯಾಚರಣೆ ತೀವ್ರಗೊಂಡಿದ್ದು, ಭದ್ರತಾಪಡೆ ಭಾರೀ ಯಶಸ್ಸು ದಾಖಲಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!