Monday, April 12, 2021

ಜಮ್ಮು ಕಾಶ್ಮೀರದ ಸೋಫಿಯಾನ್ ನಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ:  ಜಮ್ಮು ಕಾಶ್ಮೀರದ ಸೋಫಿಯಾನ್ ಸಮೀಪದ ಝೈನಾಪೋರದಲ್ಲಿ ಭದ್ರತಾಪಡೆಗಳ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.  ಕೇಂದ್ರ ಮೀಸಲು ಪೊಲೀಸ್ ಪಡೆ ಸಿಆರ್ ಪಿಎಫ್ ನ 178ನೇ ಬೆಟಾಲಿಯನ್, ರಾಷ್ಟ್ರೀಯ ರೈಫಲ್ಸ್  ಮತ್ತು ವಿಶೇಷ ಕಾರ್ಯಾಚರಣೆ ತಂಡ ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರರನ್ನು ಯಮಪುರಿಗೆ ಅಟ್ಟಲಾಗಿದೆ. ಸುದೀರ್ಘ ಅವಧಿಯ ಗುಂಡಿನ ಚಕಮಕಿಯ ಬಳಿಕ ಈ ಮೂವರು ಉಗ್ರರು ಬಲಿಯಾಗಿದ್ದು, ಕಾರ್ಯಾಚರಣೆ ಈಗಲೂ ಮುಂದುವರಿದಿದೆ. ಕಳೆದ 10 ದಿನಗಳಿಂದ  ಜಮ್ಮು ಕಾಶ್ಮೀರದಾದ್ಯಂತ ಭದ್ರತಾಪಡೆ  ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ತೀವ್ರಗೊಳಿಸಿದೆ. ಭಾರತಕ್ಕೆ ಉಗ್ರರನ್ನು ನುಸುಳಿಸುವ ಪಾಕ್ ಯತ್ನವನ್ನು ಕೂಡ ವಿಫಲಗೊಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!