ಶ್ರೀನಗರ: ಜಮ್ಮು ಕಾಶ್ಮೀರದ ಬದ್ಗಾಂನಲ್ಲಿ ಕಳೆದ 12 ಗಂಟೆಗಳಿಂದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿದೆ. ಎನ್ ಕೌಂಟರ್ ಆರಂಭವಾಗಿ 12 ಗಂಟೆ ಕಳೆದಿದ್ದು, ಇಡೀ ಪ್ರದೇಶವನ್ನು ಭದ್ರತಾಪಡೆ ಸುತ್ತುವರಿದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿ ಕುಳಿತಿದ್ದಾರೆ ಎಂದು ಶಂಕಿಸಲಾಗಿದೆ.
ಭದ್ರತಾಪಡೆ ಗರಿಷ್ಟ ಮುನ್ನೆಚ್ಚರಿಕೆ ವಹಿಸಿ ಕಾರ್ಯಾಚರಣೆ ನಡೆಸುತ್ತಿದೆ. ನಾಗರಿಕರಿಗೆ ಹಾನಿಯಾಗದಿರಲು ಆದ್ಯತೆ ನೀಡಲಾಗಿದೆ. ಇದರಿಂದ ಕಾರ್ಯಾಚರಣೆ ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಶೀಘ್ರದಲ್ಲಿಯೇ ಎಲ್ಲ ಭಯೋತ್ಪಾದಕರನ್ನು ಬಂಧಿಸುವ ವಿಶ್ವಾಸವನ್ನು ಭದ್ರತಾಪಡೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ