ಹೈದರಾಬಾದ್: ತೆಲಂಗಾಣದಲ್ಲಿ ವಿಶೇಷ ಕಾರ್ಯಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ತೆಲಂಗಾಣದ ಆಸೀಫಾಬಾದ್ ಜಿಲ್ಲೆಯ ಈಸ್ಗಾಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಮೃತಪಟ್ಟ ನಕ್ಸಲೀಯರು ಯಾವ ಸಂಘಟನೆಗೆ ಸೇರಿದ್ದವರಾಗಿದ್ದಾರೆ ಎಂಬುದು ತಿಳಿದುಬಂದಿಲ್ಲ. ಕಬಂಡ ಅರಣ್ಯದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಜಾರ್ಖಂಡ್ ನಲ್ಲಿ ಇತ್ತೀಚಿನ ದಿನಗಳಲ್ಲಿ ನಕ್ಸಲೀಯರ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ನಕ್ಸ್ ಲ್ ಗುಂಪುಗಳು ತೆಲಂಗಾಣಕ್ಕೆ ನೆಲೆ ಬದಲಾಯಿಸಿವೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ