Monday, April 12, 2021

ಮೂವರು ನಕ್ಸಲರ ಎನ್ಕೌಂಟರ್

ರಾಂಚಿ: ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ ಮಾವೋವಾದಿಗಳನ್ನು ನಿಗ್ರಹಿಸಲು ನಡೆದ ಎನ್‍ಕೌಂಟರ್‍ನಲ್ಲಿ ಮೂವರು ಬಂಡುಕೋರರು ಹತರಾಗಿದ್ದು, ಮತ್ತಿಬ್ಬರು ನಕ್ಸಲರನ್ನು ಬಂಧಿಸಲಾಗಿದೆ.
ಜಾರ್ಖಂಡ್‍ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯ ಮನ್ಮರು-ಟೇಡೋ ಪ್ರದೇಶದಲ್ಲಿ ಗುರುವಾರ ಸಿಆರ್‍ಪಿಎಫ್ ಮತ್ತು ಪೊಲೀಸರಿದ್ದ ವಾಹನದ ಮೇಲೆ ನಕ್ಸಲರು ದಾಳಿ ನಡೆಸಿದರು. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಗುಂಡಿನ ಚಕಮಕಿ ನಡೆಯಿತು. ಎನ್‍ಕೌಂಟರ್‍ನಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರು ನಕ್ಸಲರು ಹತರಾದರು. ಕೃತ್ಯ ನಡೆದ ಸ್ಥಳದಲ್ಲಿ ಇನ್ನಿಬ್ಬರು ಮಾವೋವಾದಿಗಳನ್ನು ಬಂಧಿಸಲಾಗಿದೆ. ನಕ್ಸಲರಿಂದ ಎಕೆ-47 ರೈಫಲ್, ಸ್ಫೋಟಕಗಳು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!