Newsics.com
ತಿರುವನಂತಪುರಂ: ಮಾದಕ ದ್ರವ್ಯ ಜಾಲದ ನಂಟಿನ ಆರೋಪದ ಹಿನ್ನೆಲೆಯಲ್ಲಿ ಬಂಧನದಲ್ಲಿರುವ ಬಿನೀಶ್ ಕೊಡಿಯೇರಿ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತಿರುವನಂತಪುರಂ ನಲ್ಲಿ ಇರುವ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಆರು ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.
ಬಿನೀಶ್ ಕೊಡಿಯೇರಿ ಕೇರಳದ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಮಗ. ಮಾದಕ ದ್ರವ್ಯ ಜಾಲದ ಆರೋಪಿ ಅನೂಪ್ ಮೊಹಮ್ಮದ್ ಗೆ ಬಿನೀಶ್ ಕೊಡಿಯೇರಿ ಆರ್ಥಿಕ ಸಹಾಯ ಮಾಡಿದ್ದ ಎಂದು ಆರೋಪಿಸಲಾಗಿದೆ.
ಬಿನೀಶ್ ಕೊಡಿಯೇರಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.