Monday, November 29, 2021

ಮೊದಲ ದಿನವೇ ಅಗತ್ಯ ವಸ್ತುಗಳ ದರ ಹೆಚ್ಚಳ

Follow Us

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ 21 ದಿನಗಳ  ಲಾಕ್ ಡೌನ್ ಘೋಷಿಸಿದ ಬೆನ್ನಹಿಂದೆಯೇ ದೇಶಾದ್ಯಂತ ಅಗತ್ಯ ವಸ್ತುಗಳ ದರದಲ್ಲಿ ಭಾರೀ ಹೆಚ್ಚಳವಾಗಿದೆ. ನಿನ್ನೆ ಮತ್ತು ಇವತ್ತಿಗೆ ಹೋಲಿಸಿದರೆ ತಿರುವನಂತಪುರಂನಲ್ಲಿ ಈರುಳ್ಳಿ ದರ 40 ರೂಪಾಯಿ ಹೆಚ್ಚಾಗಿದೆ. ಕೇರಳದಲ್ಲಿ ಹೆಚ್ಚಿನವನರು ಮಾಂಸಹಾರಿಗಳಾಗಿದ್ದು, ಈರುಳ್ಳಿ ಬಳಕೆ ಅನಿವಾರ್ಯವಾಗಿದೆ. ಹೈದರಾಬಾದ್ ನಲ್ಲಿ ಕೂಡ ಪರಿಸ್ಥಿತಿ ಭಿನ್ನವಾಗಿಲ್ಲ. ದರ ಹೆಚ್ಚಳದ ಜೊತೆ ಜೊತೆಗೆ  ಅಗತ್ಯ ವಸ್ತುಗಳ ಕೊರತೆ ಕೂಡ ಕಾಡಲಾರಂಭಿಸಿದೆ. ಮುಖ್ಯವಾಗಿ ಗೋಧಿ ಹುಡಿ, ಅಡುಗೆ ಎಣ್ಣೆ ಮತ್ತು ಅಕ್ಕಿಯನ್ನು ಜನರು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ.  ತೊಗರಿ ಬೇಳೆ, ಕಡ್ಲೆ ಬೇಳೆ ಕೂಡ ಅಂಗಡಿಯಲ್ಲಿ ದುರ್ಲಭವಾಗಿದೆ.  ಮೊಟ್ಟೆ ದರದಲ್ಲಿ ಕಳೆದ ಎರಡು ದಿನಗಳಲ್ಲಿ ಪ್ರತಿ ಮೊಟ್ಟೆಗೆ ಕನಿಷ್ಟ 1. 50 ರೂಪಾಯಿ ಹೆಚ್ಚಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!