newsics.com
ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ.
ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶಿಸಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ರೆಡ್ಡಿ ಈ ಸ್ಪಷ್ಟನೆ ನೀಡಿದ್ದಾರೆ.
ಕುತುಬ್ ಮಿನಾರ್ ಹೆಸರನ್ನು ಬದಲಿಸಿ, ಇದಕ್ಕೆ ವಿಷ್ಣು ಸ್ತಂಭವೆಂದು ಕರೆಯಬೇಕು. ಮಿನಾರ್ ಆವರಣದಲ್ಲಿ ವಿವಿಧೆಡೆ ಇರುವ ದೇವತೆಗಳ ಮೂರ್ತಿಗಳನ್ನು ಒಂದೆಡೆ ಇರಿಸಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ
Follow Us