newsics.com
ಕುಶಿನಗರ(ಉತ್ತರ ಪ್ರದೇಶ): ಕುಶಿನಗರ ಜಿಲ್ಲೆಯ ಕಪ್ತಗಂಜ್ ಪಟ್ಟಣದ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ನಾಲ್ವರು ಅಸುನೀಗಿದ್ದಾರೆ.
ಕಪ್ತಗಂಜ್ ಪಟ್ಟಣದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದ ಹಿನ್ನೆಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಪೋಟದಿಂದಾಗಿ ಹಲವಾರು ಮನೆಗಳಿಗೆ ಹಾನಿ ಉಂಟಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ನಾಲ್ವರು ಸಾವು
Follow Us