Tuesday, April 13, 2021

ಜಮ್ಮು ಕಾಶ್ಮೀರದ ಹೆದ್ದಾರಿ ಬದಿಯಲ್ಲಿ ಭಾರೀ ಸ್ಪೋಟಕ ಪತ್ತೆ

ಶ್ರೀನಗರ: ಸಂಭಾವ್ಯ ಭಾರೀ ದುರಂತವೊಂದನ್ನು ಜಮ್ಮು ಕಾಶ್ಮೀರದಲ್ಲಿ ತಪ್ಪಿಸಲಾಗಿದೆ. ಹೆದ್ದಾರಿ ಬಳಿ ಇರುವ ತೋಟದಲ್ಲಿ ಅಡಗಿಸಿಡಲಾಗಿದ್ದ ಬೃಹತ್ ಪ್ರಮಾಣದ ಸಂಶಯಾಸ್ಪದ ಸ್ಪೋಟಕಗಳನ್ನು ಪತ್ತೆ ಹಚ್ಚಲಾಗಿದೆ. ಜಮ್ಮು ಕಾಶ್ಮೀರ ರಸ್ತೆ ತೆರವು ಪಡೆ ಈ ಸ್ಪೋಟಕ ವಸ್ತುಗಳನ್ನು ಪತ್ತೆ ಹಚ್ಚಿದೆ.  ಬಾರಮುಲ್ಲಾ ಮತ್ತು ಹಂದ್ವಾರ ಮಧ್ಯೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಳಿ ಇರುವ  ಉದ್ಯಾನವನದಲ್ಲಿ  ಸ್ಪೋಟಕ ವಸ್ತುಗಳನ್ನು ಪತ್ತೆಹಚ್ಚಲಾಯಿತು. ಬಾಂಬ್ ನಿಷ್ಕಿೃಯ ದಳ ಘಟನಾ ಸ್ಥಳಕ್ಕೆ ಧಾವಿಸಿದೆ. ಇದೇ ವೇಳೆ ಅನಂತನಾಗ್ ಜಿಲ್ಲೆಯಲ್ಲಿ ಸರಪಂಚರೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತಪಟ್ಟ ಸರಪಂಚ್ ಅವರನ್ನು  ಅಜಯ್ ಪಂಡಿತ್ ಎಂದು ಗುರುತಿಸಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆಯ ಮಧ್ಯೆ 9 ಹಂತಗಳಲ್ಲಿ  ಪಂಚಾಯತ್ ಚುನಾವಣೆ ನಡೆಸಲಾಗಿತ್ತು. ಇದನ್ನು ಬಹಿಷ್ಕರಿಸುವಂತೆ ಉಗ್ರರು ಕರೆ ನೀಡಿದ್ದರು

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!