Tuesday, October 4, 2022

ಸಂಭ್ರಮಾಚರಣೆಯಲ್ಲಿ ಭಾಗಿಯಾಗದ ಫಡ್ನವಿಸ್: ಅನುಮಾನ ಹುಟ್ಟಿಸಿದ ಡಿಸಿಎಂ ನಡೆ

Follow Us

newsics.com

ಮುಂಬೈ: ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ರಾಜ್ಯಭಾರ ಮಾಡಿದ್ದ ದೇವೇಂದ್ರ ಫಡ್ನವಿಸ್ ಶಿಂಧೆ ಸರ್ಕಾರದಲ್ಲಿ‌ ಉಪ ಮುಖ್ಯಮಂತ್ರಿಯಾಗಿದ್ದಾರೆ.

ಕೊನೆ ಕ್ಷಣದವರೆಗೂ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾತಿತ್ತು. ಆದರೆ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ. ಈ ಬೆಳವಣಿಗೆ ಫಡ್ನವಿಸ್ ಅವರಿಗೆ ಇಷ್ಟವಾದಂತಿಲ್ಲ. ಇದಕ್ಕೆ ಪುಷ್ಟಿಯಾಗಿ ಶುಕ್ರವಾರ ಬಿಜೆಪಿಯ ಮುಂಬೈ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಭಾಗವಹಿಸಿಲ್ಲ.

ಎರಡೂವರೆ ವರ್ಷಗಳ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಗಿರುವುದು ಮತ್ತು ಪಕ್ಷವು ಮರಳಿ ಅಧಿಕಾರಕ್ಕೆ ಬಂದಿರುವುದಕ್ಕೆ ಸಂಭ್ರಮಾಚರಣೆ ಆಯೋಜಿಸಲಾಗಿತ್ತು.

ಜುಲೈ 3ರಿಂದ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನದ ತಯಾರಿಗಾಗಿ ಫಡ್ನವಿಸ್ ಅವರು ತಮ್ಮ ನಿವಾಸದಲ್ಲಿ ಸಭೆಗಳನ್ನು ನಡೆಸುತ್ತಿದ್ದು, ವ್ಯಸ್ತರಾಗಿದ್ದಾರೆ. ಹೀಗಾಗಿ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಆದರೆ, ಫಡ್ನವಿಸ್ ಯೋಚನೆಗಳೇ ಬೇರೆ ಇರಬಹುದು ಎಂದು ಹೇಳಲಾಗುತ್ತಿದೆ.

ಈ ರಾಜ್ಯದಲ್ಲಿ ದ್ರೌಪದಿ ಮುರ್ಮುಗೆ ಸಿಗಲ್ಲ ಒಂದೂ ವೋಟ್

ಮತ್ತಷ್ಟು ಸುದ್ದಿಗಳು

vertical

Latest News

ಹೊಸ ರಾಷ್ಟ್ರೀಯ ಪಕ್ಷ ಅನಾವರಣ, ಸ್ಥಳೀಯರಿಗೆ ಮದ್ಯದ ಬಾಟಲಿ, ಕೋಳಿ!

newsics.com ತೆಲಂಗಾಣ: ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್‌ ರಾವ್‌ ವಿಜಯದಶಮಿಯ ನಿಮಿತ್ತ ಹೊಸ ರಾಷ್ಟ್ರೀಯ ಪಕ್ಷವನ್ನು ಬುಧವಾರ ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಆರ್‌ಎಸ್‌ ನಾಯಕನೊಬ್ಬ ಸಾರ್ವಜನಿಕವಾಗಿ ಸ್ಥಳೀಯ ಜನರಿಗೆ...

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ....

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...
- Advertisement -
error: Content is protected !!