Tuesday, April 13, 2021

ಪ್ರಸಿದ್ಧ ಫುಟ್ಬಾಲ್ ಆಟಗಾರ ಹಂಝ ಕೋಯ ಕೊರೋನಾಗೆ ಬಲಿ

ಮಲಪ್ಪುರಂ: ಕೇರಳದ ಹೆಸರಾಂತ ಫುಟ್ಬಾಲ್ ಆಟಗಾರ ಇ. ಹಂಝ ಕೋಯಾ (61) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಮುಂಬೈನಲ್ಲಿ ಪತ್ನಿ ಮಕ್ಕಳೊಂದಿಗೆ ನೆಲೆಸಿದ್ದ ಹಂಝ ಕೋಯಾ ಮೇ 21ರಂದು ತನ್ನ ಹುಟ್ಟೂರು ಪರಪ್ಪನಂಗಡಿಗೆ ಮರಳಿದ್ದರು. ಮುಂಬೈನಿಂದ ಬಂದು ಕ್ವಾರಂಟೈನ್ ನಲ್ಲಿದ್ದ ಇವರ ಪೈಕಿ ಕೋಯಾ ಪತ್ನಿ ಮತ್ತು ಮಗನಿಗೆ ಮೊದಲು ಕೊರೋನಾ ಪಾಸಿಟಿವ್ ಕಂಡುಬಂದಿತ್ತು‌. ಬಳಿಕ ಹಂಝರಿಗೂ ಸಾಕು ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಕೇರಳದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 15ಕ್ಕೇರಿದೆ.
ಮಹಾರಾಷ್ಟ್ರ ರಾಜ್ಯದ ಪರ ಸಂತೋಷ್ ಟ್ರೋಫಿ ಟೂರ್ನಿಯಲ್ಲೂ ಆಟವಾಡಿದ್ದರು. ಮೋಹನ್ ಬೆಗಾನ್, ಮಹಮ್ಮಡನ್ ಸ್ಪೋರ್ಟ್ಸ್ ಕ್ಲಬ್ ಪರವಾಗಿಯೂ ಫುಟ್ಬಾಲ್ ಆಡಿದ್ದರು. ನೆಹರೂ ಟ್ರೋಫಿ ಫುಟ್ಬಾಲ್ ನಲ್ಲಿ ರಾಷ್ಟ್ರೀಯ ತಂಡದ ಪರವಾಗಿಯೂ ಕೋಯಾ ಆಟವಾಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!