Thursday, December 2, 2021

ಹೊಲಕ್ಕೆ ಕೀಟನಾಶಕ ಸಿಂಪಡಿಸಲು ಡ್ರೋನ್ ಬಳಕೆ

Follow Us

ವಿಜಯವಾಡ: ಆಂಧ್ರಪ್ರದೇಶದ ನಂಬೂರು ಗ್ರಾಮದ ಯುವ ರೈತನೋರ್ವ ಆಧುನಿಕ ತಂತ್ರಜ್ಞಾನವನ್ನು ಆಧರಿಸಿದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾನೆ. ಈತ ತನ್ನ ಹೊಲದಲ್ಲಿನ ಬೆಳೆಗಳಿಗೆ ಡ್ರೋನ್ ಮೂಲಕ ಕೀಟನಾಶಕ ಸಿಂಪಡಿಸುತ್ತಿದ್ದಾನೆ.

ಹಳ್ಳಿಯಲ್ಲಿ ತೀವ್ರವಾಗಿರುವ ಕಾರ್ಮಿಕರ ಕೊರತೆ, ಮತ್ತು ಅವರ ಬೇಡಿಕೆಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕಂಪ್ಯೂಟರ್ ಸೈನ್ಸ್ ಪದವೀಧರನಾದ 39 ವರ್ಷದ ಕೊಟ್ಟಿರೆಡ್ಡಿ ರೈತನೋರ್ವ ಡ್ರೋನ್ ಬಳಸಿ ಬೆಳೆಗಳಿಗೆ ಕೀಟನಾಶಕ ಸಿಂಪಡಿಸುತ್ತಿದ್ದಾನೆ.

ಈ ಡ್ರೋನ್ ಅನ್ನು ಮನುಷ್ಯರು ನಿಯಂತ್ರಿಸಬಹುದಾದ್ದರಿಂದ, ಅಗತ್ಯವಿರುವಷ್ಟು ಜಾಗಕ್ಕೆ ಕಡಿಮೆ ದರ ಹಾಗೂ ಸಮಯದಲ್ಲಿ ಕೀಟನಾಶಕ ಸಿಂಪಡಿಸಬಹುದಾಗಿದೆ. ಈಗ ಈ ಡ್ರೋನ್ ಗೆ ಬೇಡಿಕೆ ಹೆಚ್ಚಿದ್ದು, ಗ್ರಾಮದ ಇತರ ರೈತರು ಅದನ್ನು ಬಾಡಿಗೆಗೆ ಪಡೆದು ಬಳಸುತ್ತಿದ್ದಾರೆ. ಇದರಿಂದ ಕೊಟ್ಟಿರೆಡ್ಡಿಯ ಆದಾಯ ಹೆಚ್ಚಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!