ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ನಾಶಪಡಿಸಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪಂಜಾಬ್ ಮತ್ತು ಹರ್ಯಾಣದಲ್ಲಿ ರೈತರು ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ. ರಸ್ತೆ ತಡೆ ನಿರ್ಮಿಸಿದ್ದಾರೆ. ರೈಲು ಸಂಚಾರಕ್ಕೆ ಕೂಡ ಅಡ್ಡಿಯಾಗಿದೆ. ಶಿರೋಮಣಿ ಅಕಾಲಿದಳ ಸೇರಿದಂತೆ ಪಂಜಾಬಿನ ಬಹುತೇಕ ರಾಜಕೀಯ ಪಕ್ಷಗಳು ಮಸೂದೆ ವಿರೋಧಿಸಿ ಪ್ರತಿಭಟನೆ ಆರಂಭಿಸಿವೆ.