newsics.com
ಆಂಧ್ರಪ್ರದೇಶ: ಕುಡಿದ ಅಮಲಿನಲ್ಲಿ ತಂದೆಯೊಬ್ಬ ತನ್ನ ಮಗುವನ್ನು ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕಡಪಾ ಬಳಿ ನಡೆದಿದೆ.
ಅಲ್ಲಂ ವೆಂಕಟರಮಣ ಎನ್ನುವ ತಂದೆ ಆಟೋ ಡ್ರೈವರ್ ಆಗಿದ್ದು ಪ್ರತಿ ದಿನ ಕುಡಿದು ಬಂದು ಹೆಂಡತಿಯೊಂದಿಗೆ ಜಗಳವಾಡುತ್ತಿದ್ದ. ನಿನ್ನೆ (ಫೆ.22) ಜಗಳ ತಾರಕಕ್ಕೇರಿ ಏಳು ತಿಂಗಳ ಮಗುವನ್ನು ಮನೆಯಿಂದ ಹೊರಕ್ಕೆ ಎಸೆದಿದ್ದಾನೆ. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.