newsics.com
ಪುದುಚೆರಿ: ಪೊಲೀಸ್ ಅಧಿಕಾರಿಯೊಬ್ಬರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.
ಪೊಲೀಸ್ ಅಧಿಕಾರಿಯ 80 ವರ್ಷದ ತಂದೆ ಕೊರೋನಾದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆರೋಗ್ಯ ಕಾರ್ಯಕರ್ತರು ಹಾಗೂ ವೈದ್ಯರ ಮೇಲೆ ಹಲ್ಲೆ ನಡೆಸಲಾಗಿದೆ.
ಅವರ ತಂದೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅವರು ಸಾವನ್ನಪ್ಪಿದ ಕಾರಣ ಆ ಕೋಪವನ್ನು ಪೊಲೀಸ್ ಮತ್ತು ಕುಟುಂಬದವರು ನರ್ಸ್ ಹಾಗೂ ವೈದ್ಯರ ಮೇಲೆ ತೀರಿಸಿಕೊಂಡಿದ್ದಾರೆ.
ಇನ್ಸ್ಪೆಕ್ಟರ್ ಶಣ್ಮುಗ ಸುಂದರಂ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ. ವೈದ್ಯರು ಆತನ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಅವರ ತಂದೆಗೆ ಮಧುಮೇಹವಿತ್ತು, ಬಳಿಕ ಕೊರೋನಾ ಸೋಂಕು ತಗುಲಿದ್ದರಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು.
ನಾವು ನಮ್ಮ ಕೈಲಾದ ಚಿಕಿತ್ಸೆ ನೀಡಿದ್ದೇವೆ. ಆದರೆ ನಮ್ಮ ಮೇಲೆ ಅವರು ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಾಗಬೇಕು ಎಂದು ಒತ್ತಾಯಿಸಿ ವೈದ್ಯರು ಪ್ರತಿಭಟನೆ ನಡೆಸಿದರು. ಈ ಬಗ್ಗೆ ಪುದುಚೆರಿ ಕಲೆಕ್ಟರ್ ಡಾ. ಟಿ.ಎಸ್. ಅರುಣ್ ಮಾತನಾಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವೈದ್ಯರು, ನರ್ಸ್ಗಳು ಹಗಲು, ರಾತ್ರಿ ಎನ್ನದೆ ಜನರಿಗಾಗಿ ದುಡಿಯುತ್ತಿದ್ದಾರೆ ಎಂದು ಹೇಳಿದರು.
ಶಸ್ತ್ರ ಚಿಕಿತ್ಸೆ ವೇಳೆ ಮಗು ಸಾವು:ಟೀಕೆಗಳಿಂದ ಮನನೊಂದು ವೈದ್ಯ ಆತ್ಮಹತ್ಯೆ