Wednesday, October 5, 2022

ಇಂದು ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ: ದೀಪಾವಳಿ ಕೊಡುಗೆ ಘೋಷಣೆ ಸಾಧ್ಯತೆ

Follow Us

Newsics.com

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಹತ್ವದ ಪತ್ರಿಕಾಗೋಷ್ಠಿ  ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶ ಕೊರೋನಾ ಆಘಾತದಿಂದ ಚೇತರಿಸುವ ಲಕ್ಷಣ  ತೋರಿಸುತ್ತಿರುವ ಹಿನ್ನೆಲೆಯಲ್ಲಿ ಈ ಪತ್ರಿಕಾಗೋಷ್ಟಿ ಮಹತ್ವ ಪಡೆದುಕೊಂಡಿದೆ. ಕೇಂದ್ರ ಹಣಕಾಸು ಸಚಿವರು ಎರಡನೇ ಉತ್ತೇಜನಾ ಕ್ರಮಗಳನ್ನು ಘೋಷಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ರಿಸರ್ವ್ ಬ್ಯಾಂಕ್ ಕೂಡ ಭಾರತದ ಆರ್ಥಿಕತೆಯ ಬಗ್ಗೆ ಆಶಾದಾಯಕ ಚಿತ್ರಣ ನೀಡಿದೆ.  ಆರ್ಥಿಕತೆ ಚೇತರಿಕೆಯ ಹಾದಿಯಲ್ಲಿದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ದೇಶದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಘೋಷಿಸುವ ಸಾಧ್ಯತೆಯಿದೆ.

ಕಟ್ಟಡ ನಿರ್ಮಾಣ ವಲಯ ಅತೀ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸುತ್ತಿದೆ. ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖ ವಿಷಯವಾಗಿ ಪ್ರಸ್ತಾಪವಾಗಿತ್ತು. ಇದೀಗ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತವಾಗಿದೆ.  ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ; ನಗರದಲ್ಲಿ ಬಿಗಿ ಭದ್ರತೆ

newsics.com ಮೈಸೂರು; ಐತಿಹಾಸಿಕ ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ನಗರದ ಸುತ್ತಮುತ್ತ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು,ನಿಯೋಜಿಸಲಾಗಿದೆ. ಸಂಜೆ 05:07 ರಿಂದ 5.18ರ ವರೆಗೆ ಸಲ್ಲುವ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!