Saturday, April 17, 2021

ಕ್ಯಾಂಡಲ್ ಕಾರ್ಖಾನೆಯಲ್ಲಿ ಬೆಂಕಿ; 7 ಮಂದಿ ಸಾವು

ಲಕ್ನೋ: ಕ್ಯಾಂಡಲ್ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ 7 ಮಂದಿ ಸಾವನ್ನಪ್ಪಿದ ದುರಂತ ಉತ್ತರ ಪ್ರದೇಶದ ಗಾಜಿಯಾಬಾದ್ ಮೋದಿ ನಗರದ ಬಕರ್ವಾ ಗ್ರಾಮದಲ್ಲಿ ನಡೆದಿದೆ.
ಸ್ಪೋಟದಿಂದ ಬೆಂಕಿ ತಗುಲಿದ್ದು ಕಾರ್ಖಾನೆಯ ಛಾವಣಿ, ಗೋಡೆಗಳು ಛಿದ್ರವಾಗಿವೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ ಜಿಲ್ಲಾಧಿಕಾರಿ ಅಜಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರು ಮತ್ತು ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡುವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!