newsics.com
ಕೋಲ್ಕತ್ತಾ: ಕೋಲ್ಕತ್ತಾದ ಬಾಗ್ಬಜಾರ್ ಪ್ರದೇಶದ ಕೊಳೆಗೇರಿ ಪ್ರದೇಶದಲ್ಲಿ ಬುಧವಾರ ಸಂಜೆ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೊಳೆಗೇರಿಯಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಆವರಿಸಿದೆ ಎನ್ನಲಾಗಿದೆ. 20 ಅಗ್ನಿಶಾಮಕ ದಳದ ಯಂತ್ರಗಳು ಬೆಂಕಿನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ. ಗ್ಯಾಸ್ ಸಿಲಿಂಡರ್’ ಸ್ಫೋಟಗೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ ಆದರೆ ಸ್ಫೋಟಕ್ಕೆ ಕಾರಣ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ ಬಗ್ಗೆ ವರದಿಯಾಗಿಲ್ಲ.