NEWSICS.COM
ಹೈದ್ರಾಬಾದ್: ಕೋವಿಡ್- 19 ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿ ತೆಲಂಗಾಣ ಹೈಕೋರ್ಟ್ ಗುರುವಾರ (ನ.12) ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮತ್ತು ಖರೀದಿಯನ್ನು ಸಂಪೂರ್ಣ ನಿಷೇಧಿಸಲು ಆದೇಶಿಸಿದೆ.
ನ್ಯಾಯಮೂರ್ತಿ ರಾಘವೇಂದ್ರ ಚೌಹಾನ್ ಮತ್ತು ನ್ಯಾಯಮೂರ್ತಿ ಬಿ.ವಿಜಯಸೇನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠವು ವಕೀಲ ಪುಲಿಗಿಲ್ಲಾ ಇಂದ್ರ ಪ್ರಕಾಶ್ ಅರ್ಜಿಯ ಕುರಿತು ಆದೇಶ ಹೊರಡಿಸಿದೆ. ಪಟಾಕಿ ಅಂಗಡಿಗಳನ್ನು ಮುಚ್ಚಲು ಮತ್ತು ನಿಷೇಧವನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿದೆ.