Wednesday, October 5, 2022

ಕೋಲ್ಕತ್ತಾದಲ್ಲಿ ಅಗ್ನಿ ದುರಂತ; 50-60 ಮನೆ ಬೆಂಕಿಗಾಹುತಿ

Follow Us

newsics.com
ಕೊಲ್ಕತ್ತಾ: ಇಲ್ಲಿನ ಟಾಪ್ಸಿಯಾ ಪ್ರದೇಶದಲ್ಲಿ ಇಂದು (ನ.10) ಮಧ್ಯಾಹ್ನ ಭಾರೀ ಅಗ್ನಿ ದುರಂತ ಸಂಭವಿಸಿದೆ. ಅಗ್ನಿ ಅವಘಡದಿಂದಾಗಿ ಕನಿಷ್ಠ 50-60 ಮನೆಗಳು ಸುಟ್ಟು ಹೋಗಿರುವುದಾಗಿ ತಿಳಿದುಬಂದಿದೆ.
ಭಾರೀ ಅಗ್ನಿ ಆಕಸ್ಮಿಕದಲ್ಲಿ ಸುಮಾರು 50-60 ಗುಡಿಸಲುಗಳು ಸಂಪೂರ್ಣ ಸುಟ್ಟುಹೋಗಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಿಯಂತ್ರಿಸಲು ಕನಿಷ್ಠ ಆರು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಮಧ್ಯಾಹ್ನ 3.30ರ ಸುಮಾರಿಗೆ ಮೊದಲು ಬೆಂಕಿ ಕಾಣಿಸಿಕೊಂಡಿದ್ದಾಗಿ ತಿಳಿದುಬಂದಿದೆ.
ಬೆಂಕಿ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ನಮ್ಮ ಅಧಿಕಾರಿಗಳು ಬೆಂಕಿಯನ್ನು ಶಮನಗೊಳಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಅಗ್ನಿಶಾಮಕದ ಅಧಿಕಾರಿ ತಿಳಿಸಿದ್ದಾರೆ.
ಅಗ್ನಿ ಅವಘಡ ಪ್ರದೇಶಕ್ಕೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಘಟನೆಯ ಬಗ್ಗೆ ತನಿಖೆಗೆ ಸೂಚಿಸಿದ್ದಾರೆ.

2020ರ ಲೋಕೋಪಕಾರಿ ಪಟ್ಟಿಯಲ್ಲಿ ಅಜೀಮ್ ಪ್ರೇಮ್’ಜಿಗೆ ಅಗ್ರಸ್ಥಾನ

ಮೊಜಾಂಬಿಕ್ ಕ್ರೀಡಾಂಗಣದಲ್ಲಿ ಉಗ್ರರಿಂದ 50 ಮಂದಿಯ ಬರ್ಬರ ಹತ್ಯೆ

ಬೆಂಗಳೂರಿನ ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅನಾಹುತ

ಸಂತ ನೃತ್ಯ ಗೋಪಾಲ್ ದಾಸ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಸರ್ಕಾರಿ ಕೆಲಸಕ್ಕೆ ಸೇರಿದ್ದಕ್ಕೆ ಯುವತಿಯ ಕಣ್ಣುಕಿತ್ತ ದುಷ್ಕರ್ಮಿಗಳು

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!