Thursday, May 26, 2022

ಮುಂಬೈ 20 ಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ: ಸತ್ತವರ ಸಂಖ್ಯೆ ಏಳಕ್ಕೆ ಏರಿಕೆ

Follow Us

newsics.com

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈ ಮಹಾ ನಗರದಲ್ಲಿನ ಬಹು ಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸತ್ತವರ ಸಂಖ್ಯೆ ಇದೀಗ ಏಳಕ್ಕೆ ಏರಿದೆ.  ದಕ್ಷಿಣ ಮುಂಬೈನ ತಾರ್ ದೇವ್ ನಲ್ಲಿರುವ ಭಾಟಿಯಾ ಆಸ್ಪತ್ರೆ ಸಮೀಪದಲ್ಲಿರುವ  ಕಮಲ ಹೆಸರಿನ ಬೃಹತ್ ಕಟ್ಟಡದಲ್ಲಿ ಈ ದುರಂತ ನಡೆದಿದೆ.

20 ಮಹಡಿಗಳ ಕಟ್ಟಡ ಇದಾಗಿದೆ. 13 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ. ಬೆಂಕಿ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇವರಲ್ಲಿ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಆ ಮಾರ್ಗದಲ್ಲಿ ಸಂಚಾರ ನಿಷೇಧಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!