ಸೂರತ್: ಗುಜರಾತ್ ನ ಸೂರತ್ನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಕಾರ್ಖಾನೆಯೊಂದರಲ್ಲಿ ಸಂಭವಿಸಿದ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕಾರ್ಖಾನೆಯಲ್ಲಿದ್ದ 200 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ. ಅಗ್ನಿ ಶಾಮಕ ದಳಗಳ ಕ್ಷಿಪ್ರ ಕಾರ್ಯಾಚರಣೆಯಿಂದ ಬೆಂಕಿಯನ್ನು ತಕ್ಷಣ ನಂದಿಸಲಾಗಿದೆ. ಅಗ್ನಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ಕುರಿತು ತನಿಖೆಗೆ ಆದೇಶ ನೀಡಲಾಗಿದೆ.