Tuesday, April 13, 2021

ನೇಪಾಳ ಸೇನೆಯಿಂದ ಗುಂಡಿನ ದಾಳಿ, ಓರ್ವ ಸಾವು

ಸೀತಾಮರಿ: ಭಾರತ-ನೇಪಾಳ ಗಡಿಯಲ್ಲಿ ನೇಪಾಳ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೀಮಾ ಸುರಕ್ಷಾ ಬಲ(ಎಸ್ಎಸ್ ಬಿ) ಖಚಿತಪಡಿಸಿದೆ.
ಬಿಹಾರದ ಸೀತಾಮರಿ ಜಿಲ್ಲೆಯ ಲಾಲ್ ಬಂಡಿ ಪ್ರದೇಶದ ಸೋನಬರ್ಸಾ ಪೊಲೀಸ್ ಠಾಣಾ ವ್ಯಾಪ್ತಿಯ ಜಾನಕಿ ನಗರ ಗಡಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಎಸ್ಎಸ್ ಬಿ ಮಹಾ ನಿರ್ದೇಶಕ ಸಂಜಯ್ ಕುಮಾರ್ ತಿಳಿಸಿದ್ದಾರೆ.
ಈ ದಾಳಿ ಬಗ್ಗೆ ಬಿಹಾರ್ ಸರ್ಕಾರಕ್ಕೆ ಮಾಹಿತಿ ನೀಡಿದ್ದೇವೆ. ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ನಾವು ಎಲ್ಲವನ್ನೂ ನಿರ್ವಹಿಸುತ್ತಿದ್ದೇವೆ ಎಂದು ಸಂಜಯ್ ಕುಮಾರ್ ಹೇಳಿದ್ದಾರೆ. ನೇಪಾಳ ಸೇನೆ ಭಾರತೀಯ ನಾಗರಿಕರನ್ನು ವಶಕ್ಕೆ ಪಡೆದಿದೆ ಎಂದು ಸ್ಥಳೀಯರು ಹೇಳಿರುವುದಾಗಿ ಸಂಜಯ್ ಕುಮಾರ್ ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯನ್ನು 25 ವರ್ಷದ ದಿಕೇಶ್ ಕುಮಾರ್ ಎಂದು ಹಾಗೂ ಗಾಯಗೊಂಡವರನ್ನು ಉಮೇಶ್ ರಾಮ್ ಮತ್ತು ಉದಯ್ ಠಾಕೂರ್ ಎಂದು ಗುರುತಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!