Saturday, November 26, 2022

ದೇಶದ ಮೊದಲ ಮಂಗಳಮುಖಿ ಫೋಟೋ ಜರ್ನಲಿಸ್ಟ್ ಬದುಕಿನ ಕಥೆ

Follow Us

newsics.com

ಮುಂಬೈ: ಹೆಸರು ಝೋಯಾ ಥೋಮಸ್ ಲೋಬೋ. ಲಿಂಗ ಮಂಗಳಮುಖಿ. ವೃತ್ತಿ ಫೋಟೋ ಜರ್ನಲಿಸ್ಟ್. ಬಿಡುವಿನ ವೇಳೆ ಮುಂಬೈ ಲೋಕಲ್ ರೈಲ್ಲಿನಲ್ಲಿ ಭಿಕ್ಷೆ ಬೇಡುವುದು. ಇದು ದೇಶದ ಮೊದಲ ಮಂಗಳಮುಖಿ ಫೋಟೋ ಜರ್ನಲಿಸ್ಟ್ ಎಂದೇ ಗುರುತಿಸಿಕೊಂಡಿರುವ ಝೋಯಾ ಥೋಮಸ್ ಲೋಬೋ ಅವರ ಕಿರು ಪರಿಚಯ.

11 ವರ್ಷವಾಗಿದ್ದಾಗ ಅವರಿಗೆ ತಾನು ಹುಡುಗ ಅಲ್ಲ ಎಂಬ ಭಾವನೆ ಮೂಡಿತ್ತಂತೆ. ಅದನ್ನು ಮನೆಯವರಿಗೆ ತಿಳಿಸುವ ಪ್ರಯತ್ನ ಮಾಡಿದ್ದರಂತೆ. ಆದರೆ ಮನೆಯವರು ಈ ವಿಷಯ ಬಹಿರಂಗಪಡಿಸಿರಲಿಲ್ಲ.

17 ವರ್ಷವಾದಾಗ ಝೋಯಾ ಅವರಿಗೆ ಅವರ ಗುರು ಸಲ್ಮಾ ಅವರ ಪರಿಚಯವಾಯಿತಂತೆ. ಬಳಿಕ ಅವರ ಮಾರ್ಗದರ್ಶನದಲ್ಲಿ ಬದುಕು ಕಟ್ಟಿಕೊಟ್ಟಿದ್ದಾರೆ.

ಜನರು ಕೊಟ್ಟ ಭಿಕ್ಷೆಯಿಂದ ಅವರು ಒಂದು ಕ್ಯಾಮೆರಾ ಖರೀದಿಸಿದ್ದಾರೆ. ಬಿಡುವಿನ ವೇಳೆಯಲ್ಲಿ ಆ ಕ್ಯಾಮೆರಾದಲ್ಲಿ ಫೋಟೋ ಶೂಟ್ ಮಾಡುತ್ತಿದ್ದಾರೆ.

ಮುಂಬೈನಲ್ಲಿ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದಾಗ ಝೋಯಾ ಅವರು ತೆಗೆದ ಫೋಟೋ ಎಲ್ಲೆಡೆ ವೈರಲ್ ಆಗಿತ್ತು. ದೇಶ ಮತ್ತು ವಿದೇಶಗಳ ಮಾಧ್ಯಮಗಳಲ್ಲಿ ಈ ಚಿತ್ರ ಪ್ರಕಟವಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!