Saturday, April 17, 2021

ದುಬೈನಿಂದ ಕೊಚ್ಚಿಗೆ ಹೊರಟ ವಿಮಾನ; ‘ವಂದೇ ಭಾರತ ಮಿಷನ್’ಗೆ ಚಾಲನೆ

ದುಬೈ: ಲಾಕ್ ಡೌನ್ ನಿಂದಾಗಿ ವಿಶ್ವದ ನಾನಾ ದೇಶಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ದೇಶಕ್ಕೆ ಕರೆತರುವ ‘ವಂದೇ ಭಾರತ ಮಿಷನ್’ಗೆ ಚಾಲನೆ ದೊರಕಿದೆ.
177 ಭಾರತೀಯರನ್ನು ಹೊತ್ತ ಏರ್ ಇಂಡಿಯಾ ವಿಮಾನವು ಯುಎಇಯಿಂದ ಕೇರಳದ ಕೊಚ್ಚಿಗೆ ಗುರುವಾರ ಹೊರಟಿದೆ. ಇಲ್ಲಿಂದ ಒಟ್ಟು 2 ವಿಮಾನಗಳು ಹೊರಡಲಿದ್ದು 354 ಭಾರತೀಯರು ಸ್ವದೇಶಕ್ಕೆ ವಾಪಸಾಗಲಿದ್ದಾರೆ. ಇವರಲ್ಲಿ 11 ಗರ್ಭಿಣಿಯರು, ಎರಡು ಜೊತೆ ಅವಳಿಗಳೂ ಸೇರಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಐಎಕ್ಸ್ 452 ವಿಮಾನ ಅಬುಧಾಬಿಯಿಂದ ಕೊಚ್ಚಿಗೆ ತೆರಳಲಿದ್ದರೆ ಇನ್ನೊಂದು ದುಬಾಯಿಯಿಂದ ಕೋಝಿಕ್ಕೋಡ್ ಗೆ ಬಂದಿಳಿಯಲಿದೆ.
ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಭಾರತೀಯ ರಾಯಭಾರಿ ಪವನ್ ಕಪೂರ್ ಅವರು ಖುದ್ದು ಭಾರತಕ್ಕೆ ತೆರಳುವವರಿಗೆ ಮಾರ್ಗದರ್ಶನ ನೀಡಿದರು. ಎಲ್ಲರನ್ನೂ ವೈದ್ಯಕೀಯ ತಪಾಸಣೆಗೊಳಪಡಿಸಿದ ಬಳಿಕವೇ ವಿಮಾನ ಏರಲು ಅವಕಾಶ ಮಾಡಿಕೊಡಲಾಯಿತು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!