newsics.com
ಅಸ್ಸಾಂ; ಭಾರೀ ಮಳೆಯ ಅಬ್ಬರಕ್ಕೆ ಅಸ್ಸಾಂ ತತ್ತರಗೊಂಡಿದೆ. 35 ಜಿಲ್ಲೆಗಳ ಪೈಕಿ 32 ಜಿಲ್ಲೆಗಳು ಹಾನಿಗೊಳಗಾಗಿದ್ದು, ಈವರೆಗೆ 73 ಮಂದಿ ಸಾವನ್ನಪ್ಪಿದ್ದಾರೆ. , 47,72,140 ಜನರು ಪ್ರವಾಹದಲ್ಲಿ ಸಿಲುಕಿದ್ದಾರೆ ಎಂದು ವರದಿ ತಿಳಿಸಿದೆ.
ಎನ್ಡಿಆರ್ಎಫ್, ಎಸ್ಡಿಆರ್ಎಫ್, ಭಾರತೀಯ ಸೇನೆ, ಅಗ್ನಿಶಾಮಕ ದಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ. ರಾಜ್ಯಾದ್ಯಂತ ಒಟ್ಟು 23,1819 ಜನರು ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಒಟ್ಟು 1,425 ಶಿಬಿರಗಳನ್ನು ಸ್ಥಾಪಿಸಲಾಗಿದೆ.