Newsics.com
ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆಯ ಕೊಕ್ಕಯಾರ್ ಗ್ರಾಮದಲ್ಲಿ ಜಲ ಪ್ರಳಯದಿಂದ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ತಾಯಿ ಮತ್ತು ಮಗುವಿನ ಮೃತ ದೇಹವನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ.
ತಾಯಿ ಮಗನನ್ನು ಬಿಗಿದಪ್ಪಿಕೊಂಡ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ಇದು ಕರುಣಾಜನಕವಾಗಿದೆ. ಮೃತಪಟ್ಟವರನ್ನು ಪೌಸಿಯಾ ಮತ್ತು ಅಮೀನ್ ಎಂದು ಗುರುತಿಸಲಾಗಿದೆ. ಮೂವರು ಮಕ್ಕಳು ಸಹ ಪರಸ್ಪರ ಕೈಹಿಡಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ದೃಶ್ಯ ದೇವರ ನಾಡಿನ ಘನಘೋರ ಸ್ಥಿತಿಯನ್ನು ಬಿಂಬಿಸುತ್ತಿದೆ.
ಕೇರಳದಲ್ಲಿ ಪ್ರವಾಹದಿಂದಾಗಿ ಇದುವರೆಗೆ ಇದುವರೆಗೆ 28 ಮಂದಿ ಮೃತಪಟ್ಟಿದ್ದಾರೆ. ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಹೆಚ್ಚಿನ ಅನಾಹುತ ಸಂಭವಿಸಿದೆ.