Saturday, April 17, 2021

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಇನ್ನಷ್ಟು ಗಂಭೀರ

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಬ್ರಹ್ಮಪುತ್ರಾ ನದಿ ಈಗಲೂ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಗುರುವಾರ ಪ್ರವಾಹ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಕಂಡು ಬಂದಿತ್ತು. ಆದರೆ ಇದೀಗ  ಬ್ರಹ್ಮಪುತ್ರಾ ನದಿ ತಟದಲ್ಲಿ ಉತ್ತಮ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಉಲ್ಬಣಿಸಿದೆ.

ರಾಜ್ಯದ 14 ಜಿಲ್ಲೆಗಳು ಇದೀಗ ಪ್ರವಾಹದಿಂದ ತತ್ತರಿಸಿವೆ. ತೇಜ್ ಪುರ, ಧುಬ್ರಿ ಮತ್ತು ದಿಸಾಂಗ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬ್ರಹ್ಮಪುತ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ಮೂರು ಲಕ್ಷಕ್ಕೂ ಹೆಚ್ಚು ಮಂದಿ ತೊಂದರೆಗೊಳಗಾಗಿದ್ದಾರೆ. ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ.

ಗೋಲಾಪಾರಾ, ನಗೋನ್, ದಿಭ್ರೂಗಢ  ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಪ್ರವಾಹಕ್ಕೆ 40 ಮಂದಿ ಇದುವರೆಗೆ ಪ್ರಾಣ ಕಳೆದುಕೊಂಡಿದ್ದಾರೆ.  ಪ್ರವಾಹ ಪೀಡಿತ ಜನರಿಗೆ ಎಲ್ಲ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!