ನವದೆಹಲಿ: ಜಮ್ಮು ಕಾಶ್ಮೀರದ ವಾಸ್ತವ ಪರಿಸ್ಥಿತಿ ಅಧ್ಯಯನಕ್ಕೆ ತೆರಳಿದ್ದ 25 ವಿದೇಶಿ ರಾಜತಾಂತ್ರಿಕರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ತಮ್ಮ ಎರಡು ದಿನಗಳ ಪ್ರವಾಸದ ಸಂದರ್ಭದಲ್ಲಿನ ಅನುಭವಗಳನ್ನು ದೋವಲ್ ಜತೆ ಹಂಚಿಕೊಂಡರು. ಜಮ್ಮು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಕೇಂದ್ರ ಸರ್ಕಾರ ಮಾನವ ಹಕ್ಕುಗಳನ್ನು ಉಲ್ಲಂಘಿಸಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ವಾಸ್ತವ ಪರಿಸ್ಥಿತಿ ತಿಳಿದುಕೊಳ್ಳಲು ವಿದೇಶಿ ರಾಜತಾಂತ್ರಿಕರಿಗೆ ಅವಕಾಶ ನೀಡಲಾಗಿತ್ತು