ಶ್ರೀನಗರ: ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಜಮ್ಮು ಕಾಶ್ಮೀರದ ವಾಸ್ತವ ಪರಿಸ್ಥಿತಿ ಅಧ್ಯಯನ ನಡೆಸಲು 15 ವಿದೇಶಿ ರಾಜತಾಂತ್ರಿಕರು ಶ್ರೀನಗರಕ್ಕೆ ಆಗಮಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯ ಈ ಭೇಟಿಗೆ ಅವಕಾಶ ಕಲ್ಪಿಸಿದೆ. ಆದರೆ ಐರೋಪ್ಯ ಒಕ್ಕೂಟದ ಪ್ರತಿನಿಧಿ ಇದರಲ್ಲಿ ಭಾಗವಹಿಸಿಲ್ಲ. ಅಮೆರಿಕ ಸೇರಿದಂತೆ 15 ಪ್ರಮುಖ ರಾಷ್ಟ್ರಗಳ ರಾಜತಾಂತ್ರಿಕರು ನಿಯೋಗದ ಸದಸ್ಯರಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಹೊರಿಸಿವೆ. ಈ ಹಿನ್ನೆಲೆಯಲ್ಲಿ ವಿದೇಶಿ ರಾಜತಾಂತ್ರಿಕರ ಭೇಟಿ ಮಹತ್ವ ಪಡೆದುಕೊಂಡಿದೆ