newsics.com
ನವದೆಹಲಿ: ವಿದೇಶಿ ದೇಣಿಗೆ ಸ್ವೀಕರಿಸುವ ಸರ್ಕಾರೇತರ ಸಂಸ್ಥೆಯ ಪದಾಧಿಕಾರಿಗಳು, ನೋಂದಣಿಯ ಸಂದರ್ಭದಲ್ಲಿ ತಮ್ಮ ಆಧಾರ್ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸುವ ವಿದೇಶಿ ದೇಣಿಗೆ (ನಿಯಂತ್ರಣ) ಮಸೂದೆ ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ.
ನೋಂದಣಿ ಸಂದರ್ಭದಲ್ಲಿ ತಮ್ಮ ಆಧಾರ್ ಸಂಖ್ಯೆಗಳ ಎನ್‍ಜಿಒ ಪದಾಧಿಗಳು ಮಾಹಿತಿ ಒದಗಿಸುವುದನ್ನು ಈ ಮಸೂದೆಯ ಅಡಿ ಕಡ್ಡಾಯಗೊಳಿಸಲಾಗಿದ್ದು, ವಿವಿಧ ಇತರ ಮಾರ್ಪಾಡುಗಳನ್ನು ಮಾಡಲಾಗಿದೆ. ಎಂಟು ಸಂಸದರ ಅಮಾನತು ವಿರೋಧಿಸಿ ಪ್ರತಿಪಕ್ಷದವರು ನಡೆಸಿದ ಪ್ರತಿಭಟನೆಯ ನಡುವೆಯೇ ರಾಜ್ಯಸಭೆಯಲ್ಲಿ ವಿದೇಶಿ ದೇಶಣಿಗೆ (ನಿಯಂತ್ರಣ) ಮಸೂದೆಗೆ ಅವಿರೋಧವಾಗಿ ಅನುಮೋದನೆ ದೊರೆಯಿತು.
ವಿದೇಶಿ ದೇಣಿಗೆ ಪಡೆವ ಎನ್’ಜಿಒಗಳಿಗೆ ಆಧಾರ್ ಕಡ್ಡಾಯ
ಮಸೂದೆ ಕುರಿತ ಚರ್ಚೆ ವೇಳೆ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್, ಈ ವಿದೇಯಕ ಯಾವುದೇ ಎನ್‍ಜಿಒಗಳ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿದರಲ್ಲದೇ, ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ದೇಶವನ್ನು ಇದು ಹೊಂದಿದೆ ಎಂದರು. ದೇಶದಲ್ಲಿ ಉತ್ತಮ ಕೆಲಸಗಳನ್ನು ಮಾಡಲು ಬಯಸುವ ಸದುದ್ದೇಶದ ಎನ್‍ಜಿಒಗಳ ಹಿತಾಸಕ್ತಿಗಾಗಿ ಈ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.
ಸೋಮವಾರ ಲೋಕಸಭೆಯಲ್ಲಿ ಈ ವಿಧೇಯಕವನ್ನು ಅನುಮೋದಿಸಲಾಯಿತು. ಈಗ ರಾಜ್ಯಸಭೆಯಲ್ಲಿಯೂ ಅಂಗೀಕಾರ ದೊರೆತಿದ್ದು, ಅಂಕಿತಕ್ಕಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮಸೂದೆಯನ್ನು ರವಾನಿಸಲಾಗಿದೆ.