Tuesday, April 13, 2021

ಉತ್ತರಾಖಂಡ್ ನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕಾಡ್ಗಿಚ್ಚು

ಡೆಹ್ರಾಡೂನ್: ದೇವಭೂಮಿ ಉತ್ತರಾಖಂಡ್ ಕಳೆದ ನಾಲ್ಕು ದಿನಗಳಿಂದ ಕಾಡ್ಗಿಚ್ಚಿನಿಂದ ತತ್ತರಿಸುತ್ತಿದೆ. 55 ಹೆಕ್ಟೇರ್ ಗಿಂತ ಹೆಚ್ಚು ಅರಣ್ಯ  ಪ್ರದೇಶ ಸುಟ್ಟು ಕರಕಲಾಗಿದೆ. ಬೇಸಿಗೆ ಸಮಯದಲ್ಲಿ ಕಾಡ್ಗಿಚ್ಚು ಸಾಮಾನ್ಯವಾಗಿದ್ದರೂ ಇಷ್ಟು ಬೃಹತ್ ಪ್ರಮಾಣದಲ್ಲಿ  ಸಮಸ್ಯೆ ತಲೆದೋರಿರುವುದು ಆತಂಕ ಸೃಷ್ಟಿಸಿದೆ. ಬೆಂಕಿಯನ್ನು ನಂದಿಸುವ ಕಾರ್ಯ ಇದುವರೆಗೆ ಯಶಸ್ಸು ಕಂಡಿಲ್ಲ. ಜೀವ ವೈವಿಧ್ಯತೆಗೆ ಉತ್ತರಾ ಖಂಡ್ ನ ಅರಣ್ಯಗಳು ಪ್ರಸಿದ್ದಿಪಡೆದಿವೆ. ಸಾಮಾಜಿಕ ಜಾಲ ತಾಣದಲ್ಲಿ ಕಾಡ್ಗಿಚ್ಚು ಕುರಿತು ಪರಿಸರ  ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ತಕ್ಷಣ ಬೆಂಕಿ ನಂದಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಖ್ಯಾತ ನಟಿ ಜೂಹಿ ಚಾವ್ಲಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸಾಮಾಜಿಕ ಜಾಲ ತಾಣದಲ್ಲಿ ಕಾಡ್ಗಿಚ್ಚಿನ ಚಿತ್ರ ಶೇರ್ ಮಾಡಿದ್ದು, ಸರ್ಕಾರ ತಕ್ಷಣ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!