Monday, July 4, 2022

ತಿರುಪತಿ ದೇವಸ್ಥಾನದ ಮಾಜಿ ಮುಖ್ಯ ಅರ್ಚಕ ಕೊರೋನಾಕ್ಕೆ ಬಲಿ

Follow Us

ತಿರುಪತಿ: ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದ ಮಾಜಿ ಮುಖ್ಯ ಅರ್ಚಕ   ಶ್ರೀನಿವಾಸ ದೀಕ್ಷಿತುಲು ಕೊರೋನಾದಿಂದ ಮೃತಪಟ್ಟಿದ್ದಾರೆ. ಅವರಿಗೆ  73 ವರ್ಷ ಪ್ರಾಯವಾಗಿತ್ತು. ಇತರ ವಯೋ ಸಹಜ ಕಾಯಿಲೆಯಿಂದಲೂ ಅವರು ಬಳಲುತ್ತಿದ್ದರು. ಗುರುವಾರ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣ ದೃಢಪಟ್ಟಿತ್ತು. ಬಳಿಕ ಅವರನ್ನು  ವೆಂಕಟೇಶ್ವರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ತಿರುಪತಿ ತಿರುಮಲದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ತಿರುಮಲದಲ್ಲಿ  ಸೇವೆ ಸಲ್ಲಿಸುತ್ತಿರುವ  14 ಅರ್ಚಕರು ಸೇರಿದಂತೆ 140 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇವರಲ್ಲಿ ಲಡ್ಡು ತಯಾರಿಯಲ್ಲಿ ಕೆಲಸಮಾಡುತ್ತಿದ್ದ 16 ಸಿಬ್ಬಂದಿ ಕೂಡ ಸೇರಿದ್ದಾರೆ. 70 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದರೂ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಪರಿಸ್ಥಿತಿ ಇನ್ನಷ್ಟು ಗಂಭೀರ ಹಂತ ತಲುಪಿದರೆ ದೇವರ ದರ್ಶನಕ್ಕೆ  ಬ್ರೇಕ್ ಬೀಳುವ ಸಾಧ್ಯತೆ ಹೆಚ್ಚಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!