newsics.com
ಪಣಜಿ: ಗೋವಾ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.
2022ರ ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಪರ್ಸೇಕರ್ ಅವರನ್ನು ನೇಮಕ ಮಾಡಿತ್ತು.
ಮಾಜಿ ಸಿಎಂ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಪಕ್ಷ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬೆನ್ನಲ್ಲೇ ಈಗ ಪರ್ಸೆಕರ್ ಅವರೂ ಅದೇ ಹಾದಿ ಹಿಡಿದಿದ್ದಾರೆ. ಪರ್ಸೇಕರ್ ಅವರಿಗೂ ಟಿಕೆಟ್ ನಿರಾಕರಿಸಿದ್ದು, ಅಧ್ಯಕ್ಷ ಸದಾನಂದ್ ತಾನಾವ್ಡೆ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.
ನನ್ನ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸಬೇಕು ಮತ್ತು ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಬೇಕೆಂದು ಪರ್ಸೆಕರ್ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮನೋಹರ್ ಪರಿಕ್ಕರ್ ಅವರು ಕೇಂದ್ರ ರಕ್ಷಣಾ ಸಚಿವರಾಗಿ ನೇಮಕವಾದ ಬಳಿಕ ತೆರವಾದ ಸಿಎಂ ಹುದ್ದೆಯನ್ನು 2014ರಿಂದ 2017ರವರೆಗೆ ಪರ್ಸೇಕರ್ ಅಲಂಕರಿಸಿದ್ದರು.
ಬೀಟಿಂಗ್ ರಿಟ್ರೀಟ್‌ನಲ್ಲಿ ಗಾಂಧೀಜಿಗೆ ಪ್ರಿಯವಾದ ‘ಅಬೈಡ್ ವಿತ್ ಮಿ’ ಗೀತೆ ಕೈಬಿಡಲು ನಿರ್ಧಾರ
ಕಿವಿಯಲ್ಲಿ ನೋವು, ಶಿಳ್ಳೆ ಸದ್ದು, ಝುಮ್ ಅನುಭವ- ಒಮೈಕ್ರಾನ್ ಸೋಂಕಿನ ಲಕ್ಷಣ