Saturday, April 17, 2021

ಗುಜರಾತ್, ರಾಜಸ್ಥಾನದ ಮಾಜಿ ರಾಜ್ಯಪಾಲ ಅನ್ಶುಮಾನ್ ಸಿಂಗ್ ನಿಧನ

newsics.com

ಲಕ್ನೋ: ರಾಜಸ್ಥಾನ ಮತ್ತು ಗುಜರಾತಿನ ಮಾಜಿ ರಾಜ್ಯಪಾಲ, ರಾಜಸ್ಥಾನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅನ್ಶುಮಾನ್ ಸಿಂಗ್ (85) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ (ಮಾ.8) ಲಕ್ನೋದಲ್ಲಿ ಕೊನೆಯುಸಿರೆಳೆದರು.
1999-2003ರ ನಡುವೆ ರಾಜಸ್ಥಾನ ರಾಜ್ಯಪಾಲರಾಗಿದ್ದರು. ಇವರ ಅಧಿಕಾರಾವಧಿಯಲ್ಲಿ ಬರಗಾಲ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಸಾಮಗ್ರಿಗಳನ್ನು ವಿತರಿಸಿದ್ದರು.
ಮುರಾರಿ ಬಾಪು ಅವರ ಪ್ರವಚನಗಳನ್ನು ರಾಜಭವನದಲ್ಲಿ ಆಯೋಜಿಸುವುದರ ಮೂಲಕ ಪರಿಚಿತರಾಗಿದ್ದರು.‌ ಅನ್ಶುಮಾನ್ ಸಿಂಗ್ ನಿಧನಕ್ಕೆ ರಾಜಸ್ಥಾನ ರಾಜ್ಯಪಾಲ ಕಲ್‍ರಾಜ್ ಮಿಶ್ರಾ ಸಂತಾಪ ಸೂಚಿಸಿದ್ದಾರೆ.

ವೇದಾದ್ಯಯನ ವಿದ್ಯಾರ್ಥಿ ಪಯಸ್ವಿನಿ ನದಿ ಪಾಲು

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!