Monday, November 29, 2021

ಏಕ ಸಮಯದಲ್ಲಿ ನೇಣು ಗಂಬಕ್ಕೇರಿದ ನಾಲ್ವರು ಅಪರಾಧಿಗಳು

Follow Us

ನವದೆಹಲಿ; ನಿರ್ಭಯಾ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳನ್ನು ಏಕ ಕಾಲದಲ್ಲಿ ಅಂದರೆ ಬೆಳಿಗ್ಗೆ 5.30ರ ಹೊತ್ತಿಗೆ ನೇಣು ಗಂಬಕ್ಕೆ ಏರಿಸಲಾಯಿತು. ಸೂರ್ಯೋದಯದ ಮುನ್ನವೇ ಶಿಕ್ಷೆ ಜಾರಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಈ ರೀತಿ ಮಾಡಲಾಯಿತು ಎಂದು ಹೇಳಲಾಗುತ್ತಿದೆ. ಇದೇ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಿರಲು ತಿಹಾರ್ ಜೈಲ್ಲಿನ ಪರಿಸರದಲ್ಲಿ ಅತ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಇದೀಗ ನೇಣು ಗಂಬದಿಂದ ಮೃತದೇಹಗಳನ್ನು ಕೆಳಗೆ ಇಳಿಸಲಾಗಿದ್ದು, ಮರಣೋತ್ತರ ಪರೀಕ್ಷೆ ದೀನ್ ದಯಾಳ್  ಉಪಾಧ್ಯಾಯ ಆಸ್ಪತ್ರೆಯಲ್ಲಿ ನಡೆಯಲಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!