Tuesday, April 13, 2021

ಬಿಹಾರದಲ್ಲಿ ಎನ್ ಕೌಂಟರ್: ನಾಲ್ವರು ನಕ್ಸಲೀಯರ ಬಲಿ

ಪಾಟ್ನ:  ಬಿಹಾರದ ಪಶ್ಚಿಮ ಚಂಪಾರಣ್ ಬಳಿ ಸೀಮಾ ಸಶಸ್ತ್ರ ದಳ ಮತ್ತು ವಿಶೇಷ ಕಾರ್ಯಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ. ಪಶ್ಚಿಮ ಚಂಪಾರಣ್ ಸಮೀಪದ ಭಾಗಾ ಎಂಬಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹತರಾದ ನಕ್ಸಲೀಯರು ಯಾವ ಸಂಘಟನೆಗೆ ಸೇರಿದವರಾಗಿದ್ದಾರೆ ಎಂಬುದು ಇದುವರೆಗೆ ತಿಳಿದು ಬಂದಿಲ್ಲ.

ಖಚಿತ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರದ ಪಶ್ಚಿಮ ಚಂಪಾರಣ್ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಕ್ಸಲೀಯರು ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳು ಮಾಡುವ ಯಾವುದೇ ಯತ್ನವನ್ನು ಸಹಿಸುವುದಿಲ್ಲ ಎಂದು  ಮುಖ್ಯಮಂತ್ರಿ ನಿತೀಶ್ ಕುಮಾರ್ ಇತ್ತೀಚೆಗೆ ಎಚ್ಚರಿಕೆ ನೀಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!