newsics.com
ನವದೆಹಲಿ: ದೇಶದ ಹಲವೆಡೆ ಇಂದು ಜಿ-ಮೈಲ್ ಸೇವೆಯಲ್ಲಿ ವ್ಯತ್ಯಯ ಕಂಡು ಬಂದಿದೆ ಎಂದು ವರದಿಯಾಗಿದೆ.
ಮೈಲ್ ಕಳುಹಿಸಲು ಮತ್ತು ಸ್ವೀಕರಿಸಲು ಆಗುತ್ತಿಲ್ಲ ಎಂದು ಬಳಕೆದಾರಾರರು ಹೇಳಿದ್ದಾರೆ. ಭಾರತದ ಜಿ-ಮೈಲ್ ಬಳಕೆದಾರರಲ್ಲಿ ಶೇಕಡಾ 68ರಷ್ಟು ಮಂದಿಗೆ ಇಂದು ಸಮಸ್ಯೆ ಉಂಟಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಜಿ-ಮೈಲ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚಿಗೆ ಫೇಸ್ ಬುಕ್, ವಾಟ್ಸ್ ಆಪ್, ಇನ್ಸ್ಟಾಗ್ರಾಮ್ ಸರ್ವರ್ ಕೂಡ ಡೌನ್ ಆಗಿತ್ತು.