Saturday, December 10, 2022

ಚಲಿಸುತ್ತಿದ್ದ ಕಾರಲ್ಲೇ ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

Follow Us

newsics.com

ಎರ್ನಾಕುಲಂ (ಕೊಚ್ಚಿ): ಚಲಿಸುತ್ತಿದ್ದ ಕಾರಿನಲ್ಲೇ ಪಾನಮತ್ತ ದುಷ್ಕರ್ಮಿಗಳು ಮಾಡೆಲ್‌ ಒಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಈ ಆಘಾತಕಾರಿ ಘಟನೆ ಕೇರಳದ ಕೊಚ್ಚಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಈ ಸಂಬಂಧ ಓರ್ವ ಮಹಿಳೆ ಹಾಗೂ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿ ಮೂವರು ಯುವಕರು ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವ ಮಾಡೆಲ್ ಗುರುವಾರ ರಾತ್ರಿ 8:30 ರ ಸುಮಾರಿಗೆ ತನ್ನ ಸ್ನೇಹಿತನೊಂದಿಗೆ ಕೊಚ್ಚಿಯ ಬಾರ್‌ಗೆ ಬಂದಿದ್ದಾರೆ. ರಾತ್ರಿ 10 ಗಂಟೆಗೆ ಬಾರ್‌ನಲ್ಲಿ ಕುಸಿದು ಬಿದ್ದಿದ್ದಾರೆ. ಇದನ್ನೇ ನೆಪವಾಗಿಟ್ಟುಕೊಂಡ ದುಷ್ಕರ್ಮಿಗಳು ಮನೆಗೆ ತಲುಪಿಸುವುದಾಗಿ ಕರೆದೊಯ್ದು ನಗರದಲ್ಲೆಲ್ಲ ಸುತ್ತಾಡಿಸಿ ಅತ್ಯಾಚಾರವೆಸಗಿದ್ದಾರೆ. ಬಳಿಕ ಯುವತಿಯನ್ನು ಕಾಕ್ಕನಾಡಿನ ಅವರ ಮನೆಯ ಮುಂದೆ ಡ್ರಾಪ್ ಮಾಡಿದ್ದಾರೆ.

ಶುಕ್ರವಾರ ಬೆಳಗ್ಗೆ ರೂಪದರ್ಶಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಮಾಡೆಲ್ ಸ್ನೇಹಿತೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳಾದ ಮೂವರು ಯುವಕರು ಕೊಡುಂಗಲ್ಲೂರು ಮೂಲದವರು ಎಂದು ತಿಳಿದುಬಂದಿದೆ.

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮಾಡೆಲ್ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದು, ಪೊಲೀಸರು ಸಂತ್ರಸ್ತೆಯನ್ನು ಕಲಮಾಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

‘ಸ್ಪೆಷಲ್ 26’ ಸಿನಿಮಾ ಸ್ಫೂರ್ತಿ: ಉದ್ಯಮಿಗೆ 20 ಕೋಟಿ ವಂಚನೆ ಯತ್ನ, 9 ಮಂದಿ‌ ಬಂಧನ

ಬೀದಿ ದೀಪಗಳ ಬೆಳಕು ಮಧುಮೇಹಿಗಳಿಗೆ ಡೇಂಜರ್

ಎಂಗೇಜ್‌ಮೆಂಟ್‌ ಸಂಭ್ರಮದಲ್ಲಿ ಆಮೀರ್‌ ಖಾನ್‌ ಪುತ್ರಿ

ಎಂಗೇಜ್‌ಮೆಂಟ್‌ ಸಂಭ್ರಮದಲ್ಲಿ ಆಮೀರ್‌ ಖಾನ್‌ ಪುತ್ರಿ

ಶಿಕ್ಷಕರ ನೇಮಕಾತಿ: 13,363 ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!