Monday, September 27, 2021

ಮನೆ ಬಿಟ್ಟು ಬಂದ ಬಾಲಕಿ ಮೇಲೆ ರಿಕ್ಷಾ ಚಾಲಕರಿಂದ ಸಾಮೂಹಿಕ ಅತ್ಯಾಚಾರ

Follow Us

newsics.com

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಅತ್ಯಂತ ಹೀನ ಕೃತ್ಯ ನಡೆದಿದೆ. ಮನೆಯಲ್ಲಿ ಪೋಷಕರ ಜತೆ ಜಗಳವಾಡಿ ಮನೆ ಬಿಟ್ಟು ಬಂದಿದ್ದ ಬಾಲಕಿ ಮೇಲೆ 6 ಮಂದಿ ದುರುಳರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ನಾಲ್ಕು ಗಂಟೆ ಅವಧಿಯಲ್ಲಿ ಎರಡು ಬಾರಿ ಬಾಲಕಿ ಮೇಲೆ ಕಿರಾತಕರು  ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಪೋಷಕರ ಜತೆ ಜಗಳವಾಡಿ ಮನೆಯಿಂದ ಬಂದಿದ್ದ 16 ರ ಬಾಲಕಿ ಆಟೋ ಹತ್ತಿದ್ದಳು. ಬಾಲಕಿ ಬಳಿ ಹಣ ಇಲ್ಲ ಎಂಬುದು ತಿಳಿದಾಗ ಆಟೋ ಚಾಲಕ ಅವಳನ್ನು ದಾರಿ ಮಧ್ಯೆ ಇಳಿಸಿದ್ದ.

ಬಳಿಕ ಬಾಲಕಿ  ಇತರರ ಸಹಾಯ ಕೋರಿದ್ದಳು. ರಿಕ್ಷಾ ಚಾಲಕರಾದ ಮೊಹಮ್ಮದ್  ತೌಸೀಫ್ ಮತ್ತು  ಮೊಹಮ್ಮದ್ ಶನವಾಜ್  ನೆರವು ನೀಡುವಂತೆ ನಟಿಸಿದ್ದರು. ಬಾಲಕಿಯನ್ನು ರಿಕ್ಷಾದಲ್ಲಿ ಹತ್ತಿಸಿದ್ದ ಕಿರಾತಕರು  ರೈಲು  ಕೂಲಿ ಕಾರ್ಮಿಕರ ಬಿಡಾರಕ್ಕೆ ಬಾಲಕಿಯನ್ನು ಕರೆದೊಯ್ದರು. ಅಲ್ಲಿ  ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಲವು ರೈಲು ಕೂಲಿಗಳು ಕೂಡ ಇದರಲ್ಲಿ ಶಾಮೀಲಾಗಿದ್ದಾರೆ ಎಂದು  ಆರೋಪಿಸಲಾಗಿದೆ.

ಬಳಿಕ ಆರೋಪಿಗಳು ಇನ್ನೊಬ್ಬ ರಿಕ್ಷಾ ಚಾಲಕ  ಮೊಹಮ್ಮದ್ ಮುಷೀರ್ ಎಂಬಾತನಿಗೆ ಬಾಲಕಿಯನ್ನು ಒಪ್ಪಿಸಿದ್ದಾರೆ. ಮೊಹಮ್ಮದ್  ಮುಷಿರ್ ತನ್ನ ಸ್ನೇಹಿತನ ಜತೆಗೂಡಿ ರಿಕ್ಷಾದಲ್ಲಿ ಬಾಲಕಿಯ ಮೇಲೆ  ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ನಾಗ್ಪುರದ ಇಂದಿರಾ ಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಬಳಿ ಈ ಹೀನ ಕೃತ್ಯ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ.

ನೆರೆಮನೆಯವನ ಜತೆ ಪತ್ನಿ ಪರಾರಿ: ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ

 

 

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!