newsics.com
ಮಹಾರಾಷ್ಟ್ರ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಾರ್ಖಾನೆಯಿಂದ ರಾಸಾಯನಿಕ ಅನಿಲ ಸೋರಿಕೆಯಾಗಿದ್ದು, 34 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆ, ವಾಕರಿಕೆ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು ಥಾಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಶನ್ ನ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಸಂತೋಷ್ ಕದಮ್ ತಿಳಿಸಿದ್ದಾರೆ.
ರಾಸಾಯನಿಕ ಅನಿಲ ಸೋರಿಕೆಯಾ ಬಳಿಕ ಕೈಗಾರಿಕಾ ಘಟಕದ ಬಳಿ ವಾಸಿಸುತ್ತಿರುವ ಜನರು ಕಣ್ಣುಗಳಲ್ಲಿ ಉರಿ, ಉಸಿರಾಟದ ತೊಂದರೆ, ವಾಕರಿಕೆ ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅನಿಲ ಸೋರಿಕೆಯನ್ನು ನಿಲ್ಲಿಸಿದ್ದಾರೆ. ಸೋರಿಕೆಯ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.
ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ನೀಡಿಲ್ಲ: ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ