Wednesday, November 30, 2022

ಗೌತಮ್ ಅದಾನಿಗೆ ನಾಲ್ಕು ದಿನಗಳಲ್ಲಿ 97,000 ಕೋಟಿ ರೂಪಾಯಿ ನಷ್ಟ

Follow Us

newsics.com

ಮುಂಬೈ: ಖ್ಯಾತ ಉದ್ಯಮಿ ಗೌತಮ್ ಅದಾನಿ ಕಳೆದ ನಾಲ್ಕು ದಿನಗಳಲ್ಲಿ 97,000 ಕೋಟಿ ರೂಪಾಯಿ ಸಂಪತ್ತನ್ನು ಕಳೆದುಕೊಂಡಿದ್ದಾರೆ. ಅವರ ಸಂಸ್ಥೆಗಳ ಮೌಲ್ಯ ಇಷ್ಟು ಬೃಹತ್ ಪ್ರಮಾಣದಲ್ಲಿ ಕುಸಿತ ಕಂಡಿರುವುದು ಇದೇ ಮೊದಲ ಬಾರಿಯಾಗಿದೆ.

ಕಳೆದ ವಾರ ಏಷ್ಯಾದ ಅತೀ ದೊಡ್ಡ ಶ್ರೀಮಂತ ಮುಖೇಶ್ ಅಂಬಾನಿ ಅವರ ಅತೀ ಸಮೀಪಕ್ಕೆ ಬಂದಿದ್ದ ಅದಾನಿ ನಾಲ್ಕು ದಿನಗಳಲ್ಲಿ 97,000 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ.

ಸಂಸ್ಥೆಯ ಸಾಗರೋತ್ತರ ನಿಧಿ ಕುರಿತಂತೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬಳಿಕ ಮಾರುಕಟ್ಟೆಯಲ್ಲಿ ಸಂಸ್ಥೆಯ ಶೇರು ಮೌಲ್ಯ ಕುಸಿದಿರುವುದೇ ಆ ಆರ್ಥಿಕ ಹಿನ್ನೆಡೆಗೆ ಕಾರಣವಾಗಿದೆ.

ಇದೇ ವೇಳೆ ಮಾರುಕಟ್ಟೆಯಲ್ಲಿನ ಈ ಹಿನ್ನೆಡೆ ತಾತ್ಕಾಲಿಕ, ಕೆಲವೇ ದಿನಗಳಲ್ಲಿ ಸಂಸ್ಥೆ ಮೊದಲಿನ ಸ್ಥಿತಿಗೆ ಬರಲಿದೆ ಎಂದು ಅದಾನಿ ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!